ವಿಡಿಯೋ
ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ ಸಮೀಪದ ಹಿರೇನಗವಳ್ಳಿ ಬೆಟ್ಟದಲ್ಲಿರುವ ಎಕೋ ಸ್ಯಾಂಡ್ ಕ್ವಾರಿಯಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ವೇಳೆ ಸಂಭವಿಸಿದ ಸ್ಫೋಟದಲ್ಲಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ. ಮೃತರನ್ನು ಆಂಧ್ರಪ್ರದೇಶದ ಧರ್ಮಾವರಂ ಮೂಲದ 35 ವರ್ಷದ ನಾಗೇಂದ್ರ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.