ವಿಡಿಯೋ
ಮುಂಬೈನಲ್ಲಿ ಭಾನುವಾರ ಸುರಿದ ಧಾರಾಕಾರ ಮಳೆ ಭಾರೀ ಅನಾಹುತಗಳಿಗೆ ಕಾರಣವಾಗಿದೆ.
ಸೋಮವಾರ ಮುಂಬೈ-ಪುಣೆ ನಡುವಿನ ರೈಲು ಹಾಗೂ ರಸ್ತೆ ಸಂಚಾರಕ್ಕೆ ಭಾರೀ ಹೊಡೆತ ಬಿದ್ದಿದೆ.
ಭೋರ್ ಘಾಟ್ (ಖಂಡಾಲಾ ಘಾಟ್) ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಮುಂಬೈ-ಪುಣೆ ರೈಲು ಮಾರ್ಗದ ಮೂರು ಹಳಿಗಳ ಸಂಚಾರ ಸ್ಥಗಿತಗೊಂಡಿದೆ.
ಅಲ್ಲದೆ, ಭಾನುವಾರ ರಾತ್ರಿ ಸುಮಾರು 8.30ರ ಮನ್ಖುರ್ದ್ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಆರು ಮಂದಿ ಮೃತಪಟ್ಟಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.