Watch | ವಯನಾಡ್ ಸುರಂಗ ನಿರ್ಮಾಣ ಸ್ಥಳದಲ್ಲಿ ಭಾರೀ ಭೂಕುಸಿತ

ಸೋಮವಾರ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪ ಕಲ್ಲಾಡಿಯಲ್ಲಿ ಮಂಗಳವಾರ ಭಾರಿ ಭೂಕುಸಿತ ಸಂಭವಿಸಿದೆ.

ವಯನಾಡ್ ಹಾಗೂ ಮಲಪ್ಪುರಂ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ಮಾರ್ಗದ ಕಾಮಗಾರಿ ನಡೆಯುತ್ತಿದ್ದ ಕಲ್ಲಾಡಿಯಲ್ಲಿರುವ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಉಂಟಾಗಿದೆ.

ಭೂಕುಸಿತದಲ್ಲಿ ನಿರ್ಮಾಣ ಹಂತದಲ್ಲಿರುವ ಕೋಯಿಕ್ಕೋಡ್-ವಯನಾಡ್ ಅವಳಿ ಸುರಂಗ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಕೆಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸದ್ಯ ಸ್ಥಳದಲ್ಲಿ ಎನ್‌ಡಿಆರ್‌ಎಫ್ ತಂಡಗಳು ಮೊಕ್ಕಾಂ ಹೂಡಿವೆ. ಕಾರ್ಮಿಕರನ್ನು ನಿರ್ಮಾಣ ಸ್ಥಳಕ್ಕೆ ಸಾಗಿಸಿದ ಕೆಲವು ವಾಹನಗಳು ಮಣ್ಣಿನಲ್ಲಿ ಹೂತುಹೋಗಿರುವುದು ಕಂಡುಬಂದಿವೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com