ವಿಡಿಯೋ
ಲಾರಿ ಹಾಗೂ ಕ್ರೂಸರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಆರೆಬೈಲಿನಲ್ಲಿ ನಡೆದಿದೆ.
ಕ್ರೂಸರ್ ಧಾರವಾಡದಿಂದ ಅಂಕೋಲಾ ಕಡೆ ತೆರಳುತ್ತಿದ್ದು, ಲಾರಿ ಯಲ್ಲಾಪುರದಿಂದ ಅಂಕೋಲಾ ಕಡೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಕ್ರೂಸರ್‌ನಲ್ಲಿ ಇದ್ದ ಧಾರವಾಡದ ಬಸವರಾಜ್, ಮಂಜುನಾಥ್ ಚುಲ್ಲಕ್ಕಿ, ಅಭಿಷೇಕ್ ಮಲ್ಲೇಶ್ ಮಡಬಾವಿ, ಅಕ್ಷಯ್ ಮಲ್ಲಣ್ಣನವರ್ ಮೃತಪಟ್ಟಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.