Watch | ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ಅಮಿತ್ ಶಾಗೆ ಕರಂದ್ಲಾಜೆ ಪತ್ರ

ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ‘ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ (PRC) – 2026’ ನಿಯಮಾವಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ಈ ಆದೇಶವು ಭಾರತದ ಸಂವಿಧಾನದ ಆಶಯಗಳಿಗೆ ಧಕ್ಕೆ ತರುತ್ತದಲ್ಲದೆ, ದೇಶದ ಆಂತರಿಕ ಭದ್ರತೆಗೆ ದೊಡ್ಡ ಕಂಟಕವಾಗಲಿದೆ ಎಂದು ಕರಂದ್ಲಾಜೆ ಶುಕ್ರವಾರ ಬೆಂಗಳೂರಿನಲ್ಲಿ ಆರೋಪಿಸಿದ್ದಾರೆ.

ಈ ಸಂಬಂಧ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ. ಈ ವಿಚಾರದಲ್ಲಿ ತಕ್ಷಣವೇ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com