ವಿಡಿಯೋ
ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕರ್ನಾಟಕದ ಹೆಸರಿನಲ್ಲಿ ಸಲ್ಲಿಸಲಾಗುವ ಮೊದಲ ನಿತ್ಯ ಆರತಿ ಸ್ವೀಕರಿಸಲು ರಾಜ್ಯದ ಚುನಾಯಿತ ಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಹಾಗೂ ಗಣ್ಯರಿಗೆ ಅವಕಾಶ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ಶೀಘ್ರದಲ್ಲೇ ಹೊಸ ಪ್ರೋಟೋಕಾಲ್ ಆದೇಶ ಹೊರಡಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಈ ಪ್ರಸ್ತಾವಕ್ಕೆ ಟಿಟಿಡಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಸೋಮವಾರ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಟ್ರಸ್ಟ್ ಸದಸ್ಯ ಜಿ. ಭಾನುಪ್ರಕಾಶ್ ರೆಡ್ಡಿ ಅವರು, "ತಿರುಪತಿ ದೇವಾಲಯವನ್ನು ರಾಜಕೀಯ ವೇದಿಕೆಯನ್ನಾಗಿಸಬೇಡಿ.
ಇದು ಪವಿತ್ರ ಧಾರ್ಮಿಕ ಕ್ಷೇತ್ರ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು" ಎಂದು ಆಗ್ರಹಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.