ವಿಡಿಯೋ
ಬಿಡದಿ ಟೌನ್‌ಶಿಪ್ ಯೋಜನೆಗಾಗಿ ರೈತರ ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರ ಮುಂದಾಗಿರುವುದನ್ನು ಖಂಡಿಸಿ ಬಿಜೆಪಿ ಶುಕ್ರವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಭಟನೆಗೆ ನೇತೃತ್ವ ವಹಿಸಿದ್ದರು.
ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು ಹಾಗೂ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಬಿಡದಿ ಸುತ್ತಮುತ್ತಲಿನ ಗ್ರಾಮಗಳ ರೈತರೂ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಪ್ಲೆಕಾರ್ಡ್‌ಗಳನ್ನು ಹಿಡಿದ ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರವನ್ನು "ರೈತ ವಿರೋಧಿ ಸರ್ಕಾರ" ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.