ವಿಡಿಯೋ
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಪಟ್ಟಣದಲ್ಲಿ ಬುಧವಾರ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಪೊಲೀಸ್ ಇಲಾಖೆಯ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಹುತಾತ್ಮರಾಗಿದ್ದಾರೆ.
ಅನಂತನಾಗ್‌ನ ಲಾಲ್ ಚೌಕ್‌ನಲ್ಲಿ ಇಂದು ಮಧ್ಯಾಹ್ನ 12.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಅಮರನಾಥ ಯಾತ್ರೆಯ ಭದ್ರತಾ ಕರ್ತವ್ಯದಲ್ಲಿದ್ದ ಹೆಡ್ ಕಾನ್‌ಸ್ಟೆಬಲ್ ಆಶಿಕ್ ಹುಸೇನ್ ಹುತಾತ್ಮರಾಗಿದ್ದಾರೆ.
ಗುಂಡಿನ ದಾಳಿಯಲ್ಲಿ ಹುಸೇನ್ ಅವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಅನಂತನಾಗ್‌ನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು.
ಆದರೆ ವೈದ್ಯರು ಅವರು ಆಸ್ಪತ್ರೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ವೈದರು ಘೋಷಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.