Watch | 10 ವರ್ಷದಲ್ಲಿ 152 ಪ್ರಶ್ನೆ ಪತ್ರಿಕೆ ಲೀಕ್: ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ಮೂರು ಷರತ್ತು

ಕೇಂದ್ರ ಸರ್ಕಾರವು ಭಾರತದ ವಿದ್ಯಾರ್ಥಿಗಳನ್ನು ವಿಫಲಗೊಳಿಸಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭದ್ರತಾ ಪಡೆಗಳು ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ್ದಾರೆ ಎಂದು ಹೇಳಿದರು.

ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಆದರೂ ಅವರ ಮೇಲೆ ಲಾಠಿ ಚಾರ್ಚ್ ನಡೆಸಲಾಗಿದೆ.

ಕಳೆದ 10 ವರ್ಷಗಳಲ್ಲಿ 152 ಪತ್ರಿಕೆಗಳು ಸೋರಿಕೆಯಾಗಿವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಪ್ರಶ್ನೆಪತ್ರಿಕೆ ಸೋರಿಕೆ 7.5 ಕೋಟಿ ಕುಟುಂಬಗಳ ಮೇಲೆ ನೇರವಾಗಿ ಪರಿಣಾಮ ಬೀರಿದೆ ಎಂದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com