ವಿಡಿಯೋ
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಅವಕಾಶ ನೀಡುವ ಸುಳಿವು ನೀಡಿದೆ.
ಪ್ರಕರಣದ ಕುರಿತು ಬುಧವಾರ ವಿಚಾರಣೆ ನಡೆಸಿದ ನ್ಯಾಯಪೀಠ, ಸಿಬಿಐ ತನಿಖೆಯ ಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
"ನೀವು ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದೀರಿ?" ಎಂದು ನೇರವಾಗಿ ಪ್ರಶ್ನಿಸಿದ್ದು, ಈ ಕುರಿತು ಅಂತಿಮ ತೀರ್ಪನ್ನು ನ್ಯಾಯಪೀಠ ಕಾಯ್ದಿರಿಸಿದೆ.
ಸಾಕ್ಷಿದಾರರಿಗೆ ನೀಡಿರುವ ರಕ್ಷಣೆಯನ್ನು ಮುಂದುವರಿಸುವಂತೆ ಹಾಗೂ ಕಾಲಕಾಲಕ್ಕೆ ಅನುಸರಣೆ ವರದಿಗಳನ್ನು ಸಲ್ಲಿಸುವಂತೆ ಸೂಚಿಸಿದೆ. ವಿಡಿಯೋ ಇಲ್ಲಿದೆ ನೋಡಿ.