ವಿಡಿಯೋ
ಪ್ರತಿಭಟನಾನಿರತ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)ದ ವಕ್ತಾರರು ಶುಕ್ರವಾರ ಕೇಂದ್ರ ಸಚಿವರಾದ ಜೆ.ಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರನ್ನು ದೆಹಲಿಯ ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಭೇಟಿಯಾಗಿದ್ದರು.
ಈ ವೇಳೆ, ತಮ್ಮ ಮೂರು ಬೇಡಿಕೆಗಳನ್ನು ಮುಂದಿಟ್ಟಿದ್ದು ಈ ಪೈಕಿ ಎರಡು ಬೇಡಿಕೆಗಳಿಗೆ ಕೇಂದ್ರ ಸರ್ಕಾರ ತಾತ್ವಿಕವಾಗಿ ಒಪ್ಪಿಕೊಂಡಿದೆ.
ಸಿಜೆಪಿಯ ಮುಖ್ಯ ವಕ್ತಾರ ಸೌರವ್ ದಾಸ್ ಮತ್ತು ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಕೇಂದ್ರ ಸಚಿವರ ಜೊತೆ ಇಂದು ಎರಡನೇ ಸುತ್ತಿನ ಸಭೆ ನಡೆಸಿದರು.
ಈ ವೇಳೆ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೇಡಿಕೆಗೆ ಸಂಬಂಧಿಸಿದಂತೆ ಸರ್ಕಾರ ಶನಿವಾರ ಮಧ್ಯಾಹ್ನದವರೆಗೆ ಸಮಯ ಕೇಳಿದೆ ಎಂದು ವಕ್ತಾರರು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.