ವಿಡಿಯೋ
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ 26 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರು ತಮ್ಮ ಉಪವಾಸವನ್ನು ಶುಕ್ರವಾರ ಅಂತ್ಯಗೊಳಿಸಿದ್ದಾರೆ.
ಗುರುವಾರ ಮಧ್ಯರಾತ್ರಿ ಗುರ್ಗಾಂವ್‌ನ ಮೆಡಾಂಟಾ ಆಸ್ಪತ್ರೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಸೋನಂ ವಾಂಗ್ಚುಕ್ ಅವರನ್ನು ಭೇಟಿ ಮಾಡಿದರು.
ಈ ವೇಳೆ, ಕೇಂದ್ರ ಸರ್ಕಾರ ತಮ್ಮ ಪ್ರಮುಖ ಬೇಡಿಕೆಗಳ ಕುರಿತು ಸಕಾರಾತ್ಮಕ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.