Watch | ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡಲು ಆದೇಶ! ರಾಮಲಿಂಗಾ ರೆಡ್ಡಿ ಹೇಳಿದ್ದಿಷ್ಟು...

ಸವಾಲಿನ ಹವಾಮಾನ ಪರಿಸ್ಥಿತಿಗಳ ಕುರಿತು ಚರ್ಚಿಸಲು CWMA ಕಾರ್ಯದರ್ಶಿ ಟಿ.ಡಿ. ಶರ್ಮಾ ಅಧ್ಯಕ್ಷತೆಯಲ್ಲಿ ಮಂಗಳವಾರ ಕೇಂದ್ರ ಜಲ ಆಯೋಗದ ಸಭೆ ನಡೆಯಿತು.

ಈ ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದವು.

ಸಾಧಕ ಬಾಧಕಗಳ ಚರ್ಚೆ ನಡೆದ ಬಳಿಕ ತಮಿಳುನಾಡಿಗೆ ನೀರು ಬಿಡಲು CWRC ಸೂಚನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ 3500 ಕ್ಯೂಸೆಕ್ ನೀರು ಹರಿಸಲು ಆದೇಶ ನೀಡಿದೆ ಎಂದು ರಾಮಲಿಂಗಾರೆಡ್ಡಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

X
Kannada Prabha
www.kannadaprabha.com