ವಿಡಿಯೋ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯಾದಗಿರಿ ಜಿಲ್ಲೆಯ ಗುರ್ಮಿತ್ಕಲ್ ತಾಲ್ಲೂಕಿನ ಬಡೇಪಲ್ಲಿಯಲ್ಲಿ ನೂತನ "ರೈತರ ತರಬೇತಿ ಕೇಂದ್ರ ಮತ್ತು ಅಗ್ರೋ-ಪ್ರೊಸೆಸಿಂಗ್ ಕಾಮನ್ ಫೆಸಿಲಿಟಿ ಸೆಂಟರ್ ಗುರುವಾರ ಉದ್ಘಾಟಿಸಿದರು.
ಕಲ್ಯಾಣ ಕರ್ನಾಟಕ ಭಾಗದ ಗ್ರಾಮೀಣ ಮೂಲಸೌಕರ್ಯ ಮತ್ತು ರೈತರ ಆರ್ಥಿಕ ಪ್ರಗತಿಗೆ ಬೂಸ್ಟರ್ ಡೋಸ್ ನೀಡುವ ನಿಟ್ಟಿನಲ್ಲಿ ಸಂಸದ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (MPLADS) ಅಡಿಯಲ್ಲಿ ಈ ಯೋಜನೆ ಸ್ಥಾಪಿಸಲಾಗಿದೆ.
ಅನಂತರ ಮಾತನಾಡಿದ ನಿರ್ಮಲಾ ಸೀತಾರಾಮನ್, ಕರ್ನಾಟಕದ ಯಾದಗಿರಿ ಜಿಲ್ಲೆಯ ಸಾಮಾಜಿಕ-ಆರ್ಥಿಕ ಸೂಚಕಗಳು ಕಳಪೆಯಾಗಿವೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement