ವಿಡಿಯೋ
ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂಪಡೆದಿದ್ದಾರೆ ಎಂದು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಶನಿವಾರ ತಿಳಿಸಿದರು.
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದರು.
ತಪ್ಪು ತಿಳುವಳಿಕೆಯಿಂದ ಅವರು ರಾಜೀನಾಮೆ ಕೊಟ್ಟಿದ್ದಾರೆ. ಸಚಿವ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಹಿಂಪಡೆದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ರಾಮಲಿಂಗಾ ರೆಡ್ಡಿ ಅವರು ಆಸ್ತಿ ಆಗಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement