Watch | 'ನೀವು ನಮ್ಮ ಪೋಸ್ಟ್‌ಗಳನ್ನು ಡಿಲೀಟ್ ಮಾಡಬಹುದು, ಆದರೆ ನಮ್ಮನ್ನಲ್ಲ'

ನೀವು ನಮ್ಮ ಆನ್‌ಲೈನ್ ಪೋಸ್ಟ್‌ಗಳನ್ನು ಅಳಿಸಬಹುದು, ಆದರೆ, ನಮ್ಮನ್ನು ಅಳಿಸಲು ಸಾಧ್ಯವಿಲ್ಲ ಎಂದು ಕಾಕ್‌ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಶನಿವಾರ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

NEET 2026 ಪೇಪರ್ ಸೋರಿಕೆ ಹಾಗೂ CBSE ಪರೀಕ್ಷಾ ಮಂಡಳಿಯ ಅಕ್ರಮಗಳನ್ನು ವಿರೋಧಿಸಿ ಕಾಕ್‌ರೋಚ್ ಜನತಾ ಪಕ್ಷ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ಆರಂಭಿಸಿದೆ.

ಸಂಘಟನೆಯ ಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನೂರಾರು ಯುವಕರು ಜಿರೆಳೆಯ ಮಾಸ್ಕ್ ಧರಿಸಿ ಭಾಗವಹಿಸಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ತಕ್ಷಣದ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ಸರ್ಕಾರ ತಮ್ಮ ಬೇಡಿಕೆಗಳನ್ನು ಪರಿಗಣಿಸುವ ಬದಲು ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಚಟುವಟಿಕೆಗಳನ್ನು ಹತ್ತಿಕ್ಕಲು ಮುಂದಾಗಿದೆ ಎಂದು ಆರೋಪಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com