ವಿಡಿಯೋ
ಬಿಡದಿ ಬಳಿ ಬೆಂಗಳೂರು-ಮೈಸೂರು ರಸ್ತೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬದ ವಿರುದ್ದ ಪೋಸ್ಟರ್ ಅಂಟಿಸಲಾಗಿದೆ.
ತಮ್ಮ ಕುಟುಂಬದ ವಿರುದ್ದ ಪೋಸ್ಟರ್ ಅಂಟಿಸಿರೋ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದರು.
ರಾಜ್ಯದ ಸಿಎಂ ಆದಮೇಲಾದ್ರೂ ಬ್ಲೂಫಿಲ್ಮ್ ಮಾಡೋದು, ಪೋಸ್ಟರ್ ಅಂಟಿಸೋದು ಬಿಡ್ತಾರೆ ಅಂದುಕೊಂಡಿದ್ದೆ. ಆ ಖಯಾಲಿ ಇನ್ನೂ ಡಿಕೆ ಶಿವಕುಮಾರ್‌ಗೆ ಹೋಗಿಲ್ಲ.
ಬಿಡದಿ ಟೌನ್ ಶಿಪ್ ವಿಚಾರದಲ್ಲಿ ನಮ್ಮ ಹೋರಾಟ ಜನತೆಗೋಸ್ಕರ, ರೈತರ ಪರವಾಗಿ, ನನ್ನ ವಿರುದ್ಧ ಪೋಸ್ಟರ್ ಅಂಟಿಸಿ ಸುಳ್ಳು ಪ್ರಚಾರ ಮಾಡುವುದಕ್ಕೆ ಹೆದರುವ, ಜಗ್ಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement