ವಿಡಿಯೋ
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ರೋಗಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಆಸ್ಪತ್ರೆಯಲ್ಲಿ ಕಳೆದ 2 ದಿನಗಳಲ್ಲಿ 12ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಸರಿಯಾದ ಸಮಯಕ್ಕೆ ವೈದ್ಯರು ಆಸ್ಪತ್ರೆಗೆ ಬರ್ತಿಲ್ಲ. ನೈಟ್ ಶಿಫ್ಟ್ ನಲ್ಲೇ ಡಾಕ್ಟರ್ ಗಳು ಇರಲ್ಲ. ಬೆಳಗ್ಗೆ ಶಿಫ್ಟ್ ನಲ್ಲೂ ಕೂಡ ಸರಿಯಾದ ಸಮಯಕ್ಕೆ ವೈದ್ಯರು ಬರದೆ ರೋಗಿಗಳಿಗೆ ಹಾಗೂ ಎಮರ್ಜೆನ್ಸಿ ಕೇಸ್ ಗಳಿಗೆ ತೊಂದರೆ ಆಗ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ವೈದ್ಯರ ಕೊರತೆಯ ಆರೋಪಗಳನ್ನು ವೈದ್ಯಕೀಯ ಅಧೀಕ್ಷಕ ಡಾ. ಸದಾನಂದ ತಳ್ಳಿಹಾಕಿದ್ದಾರೆ.
ಈ ಕುರಿತು ಬುಧವಾರ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement