Watch | "ಮೋದಿ ಏಂಜಲ್ ನಂತೆ ಕಾಣುವ ಅತ್ಯಂತ ಸುಂದರ ವ್ಯಕ್ತಿ, ಆದ್ರೆ ಕಿಲ್ಲರ್"

ಫ್ರಾನ್ಸ್‌ನಲ್ಲಿ ಬುಧವಾರ ನಡೆದ ಜಿ7 ಶೃಂಗಸಭೆಯ ಪಾರ್ಶ್ವದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಮಾತುಕತೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ನಾವಿಕರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಪ್ರಧಾನಿಯವರ ಮಾತುಗಳಿಗೆ ಪ್ರತಿಕ್ರಿಯಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್, ಭವಿಷ್ಯದಲ್ಲಿ ಸಮುದ್ರ ಪ್ರಯಾಣಿಕರ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದಾಗಿ ಭರವಸೆ ನೀಡಿದರು.

ಪ್ರಧಾನಿ ಮೋದಿ ಅವರೊಂದಿಗಿನ ದ್ವಿಪಕ್ಷೀಯ ಮಾತುಕತೆಯ ಸಮಯದಲ್ಲಿ ಅಮೆರಿಕದ ದಾಳಿಯಲ್ಲಿ ಭಾರತೀಯ ನಾವಿಕರ ಸಾವಿಗೆ ಅವರು ಸಂತಾಪ ಸೂಚಿಸಿದರು.

ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಡಿ ಹೊಗಳಿದ್ದಾರೆ.

ನರೇಂದ್ರ ಮೋದಿ ನೋಡಲು "ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣುತ್ತಾರೆ ಆದರೆ ಸಂಪೂರ್ಣ ಕಿಲ್ಲರ್ ಅವರು ಎಂದು ಟ್ರಂಪ್ ಬಣ್ಣಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com