ವಿಡಿಯೋ
ನೀಟ್ ಪರೀಕ್ಷೆ ನಡೆದ ಭಾನುವಾರದಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ಭಾರಿ ಸಮಾವೇಶ ಆಯೋಜಿಸಿದ್ದನ್ನು ಬಿಜೆಪಿ ನಾಯಕರು ಟೀಕಿಸಿದ್ದರು.
ಈ ಸಮಾವೇಶದಿಂದ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸಮಯಕ್ಕೆ ತಲುಪಲು ತೊಂದರೆ ಅನುಭವಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು
ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಬೆಂಗಳೂರು ಟ್ರಾಫಿಕ್ ಪೊಲೀಸರು ಮುಂಚಿತವಾಗಿಯೇ ಸಾರ್ವಜನಿಕರಿಗೆ ಸಂಚಾರ ಸಲಹೆಗಳು ಮತ್ತು ಮಾರ್ಗದರ್ಶನಗಳನ್ನು ಪ್ರಕಟಿಸಿದ್ದರು.
ಇಂದು ವಿದ್ಯಾರ್ಥಿಗಳು ಪರೀಕ್ಷೆ ತಪ್ಪಿಸಿಕೊಂಡಿದ್ದಕ್ಕೆ ಕಾಂಗ್ರೆಸ್ ಸಮಾವೇಶವನ್ನೇ ಕಾರಣವೆಂದು ಹೇಳುವ ತರ್ಕವನ್ನು ಒಪ್ಪುವುದಾದರೆ, ಪ್ರಶ್ನೆಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳ ಸಂಕಷ್ಟ ಮತ್ತು ಸಾವುಗಳಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ನೇರ ಹೊಣೆಗಾರರಾಗಬೇಕು ಮತ್ತು ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕು ಎಂದು ವ್ಯಂಗ್ಯವಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement