ವಿಡಿಯೋ
Watch | ಭಾರತೀಯ ವಾಯುಪಡೆಯ SU-30 ಯುದ್ಧ ವಿಮಾನ ಪತನ; ಇಬ್ಬರು ಪೈಲಟ್ ದುರ್ಮರಣ!
ರಾಡಾರ್ ಸಂಪರ್ಕದಿಂದ ಕಡಿತಗೊಂಡು ನಾಪತ್ತೆಯಾಗಿದ್ದ ಸುಖೋಯ್ 30 ಎಂಕೆಐ ಯುದ್ಧ ವಿಮಾನ ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಪತನವಾಗಿದೆ.
ಈ ದುರ್ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ದುರ್ಮರಣ ಹೊಂದಿದ್ದಾರೆ ಎಂದು ಭಾರತೀಯ ವಾಯುಪಡೆ (IAF) ಶುಕ್ರವಾರ ತಿಳಿಸಿದೆ.
ತರಬೇತಿಯಲ್ಲಿದ್ದ Su-30MKI ಯುದ್ಧ ವಿಮಾನ ಗುರುವಾರ ಜೋರ್ಹತ್‌ನಿಂದ ಸುಮಾರು 60 ಕಿಮೀ ದೂರದಲ್ಲಿರುವ ಕರ್ಬಿ ಆಂಗ್ಲಾಂಗ್ ಪ್ರದೇಶದಲ್ಲಿ ಪತನಗೊಂಡಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕ್ವಾಡ್ರನ್ ಲೀಡರ್ ಅನುಜ್ ಮತ್ತು ಲೆಫ್ಟಿನೆಂಟ್ ಪೂರ್ವೇಶ್ ದುರಾಗ್ಕರ್ ಸಾವನ್ನಪ್ಪಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
