ವಿಡಿಯೋ
ಜಮ್ಮುನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಗುಂಡಿನ ದಾಳಿ ನಡೆದಿದೆ.
ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಭದ್ರತಾ ಸಿಬ್ಬಂದಿ ದಾಳಿಕೋರನನ್ನು ಬಂಧಿಸಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಬುಧವಾರ (ಮಾರ್ಚ್ 11) ಜಮ್ಮುವಿನ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ನಡೆದ ವಕೀಲರ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.
ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಕೂಡ ಇದ್ದರು. ಚೌಧರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಯಿತು.
ಗುಂಡಿನ ದಾಳಿ ನಡೆಸಿದ ಕಮಲ್ ಸಿಂಗ್ ಜಮ್ವಾಲ್ ಎಂಬಾತನನ್ನು ಭದ್ರತಾ ಸಿಬ್ಬಂದಿ ಬಂಧಿಸಿ ವಶಕ್ಕೆ ಪಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement