ವಿಡಿಯೋ
Watch | ಒಡಿಶಾ ಕಾಂಗ್ರೆಸ್ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್! ನನಗಿದು ಹೊಸತಲ್ಲ- ಡಿ.ಕೆ ಶಿವಕುಮಾರ್
ನಾನು ಒಡಿಶಾ ಶಾಸಕರನ್ನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ. ಅಧಿವೇಶನ ಕಲಾಪ ಮುಗಿದ ಬಳಿಕ ನಾನು ಹೋಗಿ ಅವರನ್ನು ಭೇಟಿ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.
ರಾಜ್ಯ ಸಭೆ ಚುನಾವಣೆಯಲ್ಲಿ ಅಡ್ಡಮತದಾನವಾಗದಂತೆ ತಡೆಯಲು ನಿಮಗೆ ಪಕ್ಷ ಟಾಸ್ಕ್ ನಿಡಿದೆಯೇ ಎಂದು ಕೇಳಿದಾಗ, ಪಕ್ಷ ಹೇಳಿದ್ದನ್ನು ಮಾಡಬೇಕು.
ಎಲ್ಲಾ ರಾಜ್ಯಗಳಲ್ಲೂ ಈ ರೀತಿ ನಡೆಯುತ್ತಿರುತ್ತದೆ. ಇದು ಹೊಸತೇನಲ್ಲ ಎಂದು ಡಿಸಿಎಂ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
