Watch | ನಾನು ಸದನ ನಡೆಸುವುದಿಲ್ಲ; ಮುಂದೂಡಿ ಹೊರನಡೆದ ಸ್ಪೀಕರ್ ಖಾದರ್!

ಅಪರೂಪದ ಬೆಳವಣಿಗೆಯಲ್ಲಿ, ರಾಜ್ಯ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಅವರು ಸೋಮವಾರ ಸದನವನ್ನು ಮುಂದೂಡಿ ಹೊರನಡೆದ ಪ್ರಸಂಗ ನಡೆದಿದೆ.

ಶಾಸಕರು ಕೇಳಿದ ಪ್ರಶ್ನೆಗಳಿಗೆ ಸರ್ಕಾರ ಸಮರ್ಪಕ ಉತ್ತರ ನೀಡಿಲ್ಲ ಎಂಬ ಅಸಮಾಧಾನದಿಂದ ಅವರು ಈ ಕ್ರಮ ಕೈಗೊಂಡರು.

ವಿಧಾನಸಭೆಯಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಶಾಸಕರು ಕೇಳಿದ್ದ 230 ಪ್ರಶ್ನೆಗಳಲ್ಲಿ ಕೇವಲ 84ಕ್ಕೆ ಮಾತ್ರ ಉತ್ತರಗಳನ್ನು ಮಂಡಿಸಿದರು.

ಕಳೆದ ವಾರವೂ ಸರ್ಕಾರ ಕೇವಲ ಸುಮಾರು 50 ಪ್ರಶ್ನೆಗಳಿಗೆ ಮಾತ್ರ ಉತ್ತರ ನೀಡಿದ್ದರಿಂದ ಸ್ಪೀಕರ್ ಯು ಟಿ ಖಾದರ್ ಅಸಮಾಧಾನಗೊಂಡಿದ್ದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com