Watch | ದೆಹಲಿಯಲ್ಲಿ ಅಗ್ನಿ ಅವಘಡ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಒಂಬತ್ತು ಮಂದಿ ಸಜೀವ ದಹನ!

ನೈಋತ್ಯ ದೆಹಲಿಯ ಪಾಲಂ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಬೆಳಗ್ಗೆ ಭೀಕರ ಅಗ್ನಿ ಅವಘಡ ಸಂಭವಿಸಿದೆ.

ಈ ದುರ್ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಒಂಬತ್ತು ಜನ ಸಜೀವ ದಹನವಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಲಂನ ರಾಮ್ ಚೌಕ್ ಮಾರುಕಟ್ಟೆಯ WZ-124A ನಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ನೆಲ ಮಹಡಿ ಮತ್ತು ಮೊದಲ ಮಹಡಿಯಲ್ಲಿ ರಾಜೇಂದರ್ ಕಶ್ಯಪ್ ಒಡೆತನದ ಬಟ್ಟೆ ಮತ್ತು ಸೌಂದರ್ಯವರ್ಧಕ ಶೋರೂಮ್ ಇತ್ತು.

ಆದರೆ ಅವರ ಕುಟುಂಬ ಎರಡನೇ ಮತ್ತು ಮೂರನೇ ಮಹಡಿಯಲ್ಲಿ ವಾಸಿಸುತ್ತಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com