Watch | ಐಪಿಎಲ್ ಟಿಕೆಟ್ ಚರ್ಚೆ: ಊಳಿಗಮಾನ್ಯ ಚಿಂತನೆ..; ಕಾಂಗ್ರೆಸ್ ಶಾಸಕರಿಗೆ ತೇಜಸ್ವಿ ಸೂರ್ಯ ತರಾಟೆ

ಐಪಿಎಲ್ ಟಿಕೆಟ್ ಉಚಿತವಾಗಿ ನೀಡಬೇಕು ಎನ್ನುವ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಹೇಳಿಕೆಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಟೀಕೆ ವ್ಯಕ್ತಪಡಿಸಿದ್ದಾರೆ.

ಐಪಿಎಲ್ ಪಂದ್ಯಗಳಿಗೆ ಕೆಲವೇ ದಿನಗಳು ಬಾಕಿ ಉಳಿದಿರುವಾಗ ಈ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಸದನದಲ್ಲೂ ಈ ವಿಚಾರ ಪ್ರತಿಧ್ವನಿಸಿದೆ.

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಂಸದ ತೇಜಸ್ವಿ ಸೂರ್ಯ, ಶಾಸಕರ ಹೇಳಿಕೆ ತಪ್ಪು ಮತ್ತು ಸ್ಪಷ್ಟವಾಗಿ ಹೇಳುವುದಾದರೆ, ಆಶ್ಚರ್ಯವೇನಿಲ್ಲ.

ರಾಜ್ಯದ ನಿಜವಾದ ಸಮಸ್ಯೆಗಳು ಗಮನ ಸೆಳೆಯುವ ಸಮಯದಲ್ಲಿ, ವಿಧಾನಸಭೆಯಲ್ಲಿ ಇಂತಹ ವಿಷಯವನ್ನು ಎತ್ತುವುದು ಸರಿಯೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com