Watch | DGP ಅಮಾನತು ಆದೇಶ ವಾಪಸ್ ಯಾಕೆ? ಪರಮೇಶ್ವರ್ ಹೇಳಿದ್ದು ಹೀಗೆ...

ಡಿಜಿಪಿ ಕೆ. ರಾಮಚಂದ್ರ ರಾವ್ ಅವರ ಅಮಾನತು ಆದೇಶವನ್ನು ರಾಜ್ಯಸರ್ಕಾರ ಬುಧವಾರ ವಾಪಸ್ ಪಡೆದಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಸೇವೆಗೆ ಮರುಸೇರ್ಪಡೆಗೊಳಿಸಿದೆ.

ಅಧಿಕೃತ ಆದೇಶದ ಪ್ರಕಾರ, 1993 ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಡೈರಕ್ಟರ್ ಜನರಲ್ ಆಫ್ ಪೋಲಿಸ್ (ಪೊಲೀಸ್ ಮ್ಯಾನುಯಲ್) ಆಗಿ ನೇಮಿಸಲಾಗಿದೆ.

ಡಿಜಿಪಿ ರಾಮಚಂದ್ರ ರಾವ್ ಅವರು ಮೇ ಅಂತ್ಯದ ವೇಳೆಗೆ ನಿವೃತ್ತರಾಗುತ್ತಿದ್ದಾರೆ ಮತ್ತು ಪಿಂಚಣಿ ಸಮಸ್ಯೆಗಳಿವೆ ಎಂದು ಅವರು ಮನವಿ ಸಲ್ಲಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮತ್ತೆ ನೇಮಕ ಮಾಡಿಕೊಂಡಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ ಗುರುವಾರ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com