ವಿಡಿಯೋ
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಗಿದೆ.
ಈ ಮೂಲಕ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಲು ಸುವೇಂದು ಅಧಿಕಾರಿ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇಂದು ಕೋಲ್ಕತ್ತಾದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅಧಿಕಾರಿ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು ಮತ್ತು ಹೊಸದಾಗಿ ಆಯ್ಕೆಯಾದ ಎಲ್ಲಾ ಬಿಜೆಪಿ ಶಾಸಕರು ಅದನ್ನು ಅನುಮೋದಿಸಿದರು.
ನಂತರ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತವಾಗಿ ಸುವೇಂದು ಅಧಿಕಾರಿ ಅವರ ಹೆಸರನ್ನು ಘೋಷಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement