ವಿಡಿಯೋ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಬಿಜೆಪಿಯ ಸುವೇಂದು ಅಧಿಕಾರಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.
ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಆರ್.ಎನ್.ರವಿ ಅಧಿಕಾರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹಿರಿಯ ಬಿಜೆಪಿ ನಾಯಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಬಿಜೆಪಿ ಶಾಸಕರಾದ ದಿಲೀಪ್ ಘೋಷ್, ಅಗ್ನಿಮಿತ್ರ ಪಾಲ್, ಅಶೋಕ್ ಕೀರ್ತಾನಿಯಾ, ನಿಸಿತ್ ಪ್ರಾಮಾಣಿಕ್ ಮತ್ತು ಕ್ಷುದಿರಾಮ್ ತುಡು ಕೂಡ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement