ವಿಡಿಯೋ
ಬೆಳಗಾವಿಯಲ್ಲಿ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಹೆಸರಿನಲ್ಲಿ ಸಾವಿರಾರು ಕೋಟಿ ಹಣಕಾಸು ವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಮಾಜ ಸೇವಕ ಹಾಗೂ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ ಅವರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ.
ಪ್ರಕರಣದ ಅರೋಪದ ಮೇಲೆ ಶಿವಾನಂದ ನೀಲಣ್ಣವರ ಅವರನ್ನು ಸುಧೀರ್ಘ ವಿಚಾರಣೆ ನಡೆಸಿದ ಮಾಳಮಾರುತಿ ಪೊಲೀಸರು ಬಳಿಕ ತಮ್ಮ ವಶಕ್ಕೆ ತೆಗೆದುಕೊಂಡು ಠಾಣೆಯಲ್ಲಿ ವಿಚಾರಣೆ ನಡೆಸಿದರು.
ಯಾವುದೇ ನೊಂದಣಿಯಿಲ್ಲದೆ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಹೆಸರಿನಲ್ಲಿ ಶಿವಾನಂದ ನೀಲಣ್ಣವರ ಸುಮಾರು 35 ಸಾವಿರ ಜನರಿಂದ 4500 ಕೋಟಿ ರೂ ಗಳಿಗೂ ಹೆಚ್ಚು ಹಣ ಸಂಗ್ರಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement