ವಿಡಿಯೋ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸುವಾಗ, ಏಕವಚನದಲ್ಲಿ "ಈ ನನ್ನ ಮಕ್ಕಳು ಕಾಂಗ್ರೆಸ್ನವರು ಇದ್ದಾರಲ್ಲಾ..." ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿದ್ದರು.
ಇದರ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಕಾರ್ಯಕರ್ತರು ಕೂಡ ವಿಜಯೇಂದ್ರ ವಿರುದ್ಧ ಮಂಗಳವಾರ ಪೋಸ್ಟರ್ ಸಮರ ಪ್ರಾರಂಭಿಸಿದ್ದರು.
ಈ ಬೆನ್ನಲ್ಲೇ, ನಾನು ಯಾವುದೇ ಉದ್ದೇಶಪೂರ್ವಕವಾಗಿ ಆ ಪದಗಳನ್ನು ಬಳಸಲಿಲ್ಲ ಎಂದು ಸ್ಪಷ್ಟನೆ ನೀಡಿರುವ ವಿಜಯೇಂದ್ರ, ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ ಕ್ಷಮೆಯಾಚಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.