ವಿಡಿಯೋ
ಕಬ್ಬಿನ ಬೆಲೆ ನಿಗದಿಪಡಿಸಬೇಕು ಹಾಗೂ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ, ಮೈಸೂರಿನಲ್ಲಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.
ಈ ಪ್ರತಿಭಟನೆಯನ್ನು 'ಕಬ್ಬು ಬೆಳೆಗಾರರ ಸಮನ್ವಯ ಸಮಿತಿ' ಆಯೋಜಿಸಿತ್ತು. ರೈತರು ಕೈಯಲ್ಲಿ ಕಬ್ಬು ಹಿಡಿದುಕೊಂಡು ಬೀದಿಗಿಳಿದು, ಬನ್ನೂರು ರಸ್ತೆಯಲ್ಲಿ ರಸ್ತೆ ತಡೆ ನಡೆಸಿದರು.
ಪ್ರತಿಭಟನಾಕಾರರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಕಬ್ಬಿನ ಬೆಲೆ ಸಮಸ್ಯೆಯನ್ನು ಬಗೆಹರಿಸುವಲ್ಲಿ ರಾಜಕೀಯ ಪಕ್ಷಗಳು ವಿಫಲವಾಗಿವೆ ಎಂದು ಆರೋಪಿಸಿದ ಅವರು, ವಿರೋಧ ಪಕ್ಷಗಳ ಕಾರ್ಯವೈಖರಿಯ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.