Watch | ಸ್ಟಿಂಗ್ ಗೆ ಕರ್ನಾಟಕ ಮಾಡೆಲ್- ರಾಜಣ್ಣ; ಬೇಕಿದ್ರೆ ಪಕ್ಷ ಬಿಟ್ಟು ಹೋಗ್ಲಿ- ಬಾಲಕೃಷ್ಣ ಆಕ್ರೋಶ

ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನಡೆದ ಸ್ಟಿಂಗ್ ಆಪರೇಷನ್‌ನಿಂದಾಗಿಯೇ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಬೇಕಾಯಿತು ಎಂದು ಕೆ.ಎನ್. ರಾಜಣ್ಣ ಹೇಳಿದ್ದಾರೆ.

ಮುಂದೆ ದೇಶಾದ್ಯಂತ ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಕರ್ನಾಟಕ ಮಾಡೆಲ್ ಎಂಬ ಅಪಕೀರ್ತಿಗೆ ಕಾರಣವಾಗುತ್ತದೆ ಎಂದು ರಾಜಣ್ಣ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್‌ನಿಂದ ಪಕ್ಷದ ಮೇಲಾಗುತ್ತಿರುವ ಪರಿಣಾಮಗಳ ಕುರಿತು ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿದ್ದಾರೆ.

ವೈಯಕ್ತಿಕ ವರ್ಚಸ್ಸಿನ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಸಹ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿದ್ದಾರೆ ಎಂಬ ಮಾಹಿತಿ ಇದೆ ಎಂದು ತಿಳಿಸಿದರು.

ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಹೆಚ್.ಸಿ. ಬಾಲಕೃಷ್ಣ, ಪಕ್ಷದಲ್ಲೇ ಇದ್ದು ಅನ್ನ ತಿಂದು ದ್ರೋಹ ಬಗೆಯುವುದಾದರೆ ಪಕ್ಷ ಬಿಟ್ಟು ಹೋಗಲಿ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X