ವಿಡಿಯೋ
ಕನ್ನಡಿಗರಿಗೆ ಉದ್ಯೋಗ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ಆರಂಭಿಸಿರುವ ಅಭಿಯಾನ ಸಂಬಂಧ ಕರವೇ ಅಧ್ಯಕ್ಷ ನಾರಾಯಣಗೌಡ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಕರ್ನಾಟಕದ ಐಟಿ-ಬಿಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದ ಹಕ್ಕನ್ನು ಪ್ರತಿಪಾದಿಸಿ ಮಾಹಿತಿ ಸಂಗ್ರಹಿಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಾಚರಣೆಯನ್ನು ವಿರೋಧಿಸಿದ್ದ ಉದ್ಯಮಿ ಮೋಹನದಾಸ ಪೈ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿದ್ದುಕೊಂಡು ಕನ್ನಡಿಗರ ಹಿತಾಸಕ್ತಿಯನ್ನು ಹಾಳುಮಾಡಲು ಯತ್ನಿಸುತ್ತಿರುವ ಮೋಹನದಾಸ ಪೈ ಈ ರಾಜ್ಯದಲ್ಲಿದ್ದ ಶಕುನಿಯಂತಿದ್ದಾರೆ.
ಕನ್ನಡಿಗರ ಉದ್ಯೋಗದ ವಿಚಾರ ಪ್ರಸ್ತಾಪಿಸಿದರೆ ಕ್ಯಾತೆ ತೆಗೆಯುವ ಅವರಿಗೆ ಕರ್ನಾಟಕದಲ್ಲಿ ಇರಲು ಯೋಗ್ಯತೆಯಿಲ್ಲ, ಅವರು ತಕ್ಷಣವೇ ರಾಜ್ಯ ತೊರೆಯಬೇಕು ಎಂದು ನಾರಾಯಣಗೌಡ ವಾಗ್ದಾಳಿ ನಡೆಸಿದರು. ವಿಡಿಯೋ ಇಲ್ಲಿದೆ ನೋಡಿ.