Watch | 'ಕಾಂಗ್ರೆಸ್ ನಾಯಕರನ್ನು ಕತ್ತರಿಸಿ ಎಸೆಯುತ್ತಾರೆ': ಪ್ರಿಯಾಂಕ್ ಖರ್ಗೆ ರಿಯಾಕ್ಷನ್!

ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಂಗಳವಾರ ಕಾಂಗ್ರೆಸ್ ನಾಯಕರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೋಲಾರದಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ' ಪಾದಯಾತ್ರೆ ವೇಳೆ ನಾರಾಯಣಸ್ವಾಮಿ ಮಾತನಾಡಿ, ಇಡೀ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಹೊರಟಿದೆ ಎಂದರು.

ಅರಾಜಕತೆ ಸೃಷ್ಟಿ ಮಾಡಿದ್ದೇಯಾದರೆ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಈ ಹೇಳಿಕೆಯನ್ನು ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿರುವ ಛಲವಾದಿ ನಾರಾಯಣಸ್ವಾಮಿ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದರು.

ಈಮಧ್ಯೆ, ಸಮಾವೇಶದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಾರಾಯಣಸ್ವಾಮಿ, ತಾನು ಉದ್ದೇಶಪೂರ್ವಕವಾಗಿ ಈ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಇನ್ನು ಈ ಎಲ್ಲಾ ಬೆಳವಣಿಗೆಗಳ ನಡುವೆ ಗೃಹ ಮಂತ್ರಿ ಪ್ರಿಯಾಂಕ್ ಖರ್ಗೆ ಬುಧವಾರ, ನಾರಾಯಣಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X