ವಿಡಿಯೋ
ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿಯ ಹಿಂಡಲಗಾ ಜೈಲು ಭರೋ ಚಳವಳಿ ವೇಳೆ ಬೆಳಗಾವಿಯತ್ತ ಪಾದಯಾತ್ರೆ ಮೂಲಕ ತೆರಳಲು ಸಜ್ಜಾಗಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ ಹೊರವಲಯದ ಮುಕ್ತಿ ಮಠದಲ್ಲಿ ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಬೃಹತ್ ರಸ್ತೆ ತಡೆ ಹಾಗೂ ಪ್ರತಿಭಟನಾ ರ್ಯಾಲಿಗೆ ಅನ್ನದಾತರು ಸಜ್ಜಾಗಿದ್ದರು.
ಈ ವೇಳೆ ಪ್ರತಿಭಟನೆಯನ್ನು ತಡೆಯಲು ಮುಂದಾದ ಪೊಲೀಸರು, ಚೂನಪ್ಪ ಪೂಜಾರಿ ಮತ್ತು ರೈತರನ್ನು ಬಲವಂತವಾಗಿ ವಶಕ್ಕೆ ಪಡೆಯಲು ಆರಂಭಿಸಿದರು.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಚೂನಪ್ಪ ಪೂಜಾರಿ ಹಾಗೂ ರೈತರು, ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ವಿಡಿಯೋ ಇಲ್ಲಿದೆ ನೋಡಿ.