ವಿಡಿಯೋ
ಅಡುಗೆಗೆ ಬಳಸಿದ ಎಣ್ಣೆಯನ್ನು ಮರುಬಳಕೆ ಮಾಡುವುದನ್ನು ತಡೆಯುವ ಉದ್ದೇಶದಿಂದ ಹೊಸ ಮೊಬೈಲ್ ಆ್ಯಪ್ ನ್ನು ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ ಖಾದರ್ ತಿಳಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಟೇಲ್ ಗಳು ಮತ್ತು ರೆಸ್ಟೋರೆಂಟ್ಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಅಡುಗೆ ಎಣ್ಣೆಯನ್ನು ಖರೀದಿಸಿ ಬಳಸುತ್ತಾರೆ.
ಎಣ್ಣೆ ಖರೀದಿ ಮತ್ತು ಬಳಕೆಗೆ ಸಂಬಂಧಿಸಿದ ದತ್ತಾಂಶವನ್ನು ಸಂಗ್ರಹಿಸಿ, ಅದರ ಮೇಲೆ ನಿಗಾ ಇಡುವುದು ಈ ಆ್ಯಪ್ನ ಉದ್ದೇಶವಾಗಿದೆ.
ಪ್ರಾಯೋಗಿಕ ಯೋಜನೆಯನ್ನು ಮೊದಲ ಹಂತದಲ್ಲಿ ಬೆಂಗಳೂರು, ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿ ಸೇರಿದಂತೆ ನಾಲ್ಕು ನಗರಗಳಲ್ಲಿ ಆರಂಭಿಸಲಾಗುತ್ತದೆ ಎಂದರು. ವಿಡಿಯೋ ಇಲ್ಲಿದೆ ನೋಡಿ.