

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಗೆ ಬೇಕಾಗಿದ್ದ ಪ್ರಮುಖ ಉಗ್ರ ಲತೀಫ್ ಭಟ್ ನನ್ನು ಭಾರತೀಯ ಸೇನೆ ಬುಧವಾರ ಎನ್ ಕೌಂಟರ್ ನಲ್ಲಿ ಹೊಡೆದುರುಳಿಸಿದೆ.
ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾ (LeT) ಸಂಘಟನೆಯ ಉಗ್ರ ಲತೀಫ್ ಭಟ್ ಹತನಾಗಿದ್ದಾನೆ.
ನವೆಂಬರ್ 11ರಂದು ಅಖ್ರಾನ್ ಪ್ರದೇಶದಲ್ಲಿ ಸಿಆರ್ಪಿಎಫ್ ಚೆಕ್ಪೋಸ್ಟ್ ಮೇಲಿನ ದಾಳಿಯಲ್ಲಿ ಈತ ಭಾಗಿಯಾಗಿದ್ದ. ಈ ವೇಳೆ ಮೂವರು CRPF ಸಿಬ್ಬಂದಿ ಗಾಯಗೊಂಡಿದ್ದರು.
ಆತನ ಸುಳಿವು ನೀಡಿದವರಿಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು 15 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ವಿಡಿಯೋ ಇಲ್ಲಿದೆ ನೋಡಿ.