ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ, ರಾಜ್ಯದಾದ್ಯಂತ ಏಳು ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಸ್ಥಳಗಳಲ್ಲಿ ಲೋಕಾಯುಕ್ತ ತಂಡ ಬುಧವಾರ ಬೆಳಿಗ್ಗೆ ದಾಳಿ ನಡೆಸಿದೆ.
ಹುಬ್ಬಳ್ಳಿಯಲ್ಲಿ, ಕೆಎಸ್ಆರ್ಟಿಸಿ (KSRTC) ಮಾಜಿ ಅಧಿಕಾರಿ ಎಸ್.ವಿ. ಅತ್ತಿಕಟ್ಟಿಮಠ ಅವರ ನಿವಾಸದ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಬೀದರ್ ನಲ್ಲಿ ಬಿಆರ್ಐಎಂಎಸ್ (BRIMS) ನರ್ಸಿಂಗ್ ಕಾಲೇಜು ಪ್ರಾಂಶುಪಾಲ ರಾಜಕುಮಾರ್ ಮಲಗೆ ಅವರಿಗೆ ಸಂಬಂಧಿಸಿದ ಐದು ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ದಾಖಲೆಗಳು ಮತ್ತು ವಾಹನಗಳನ್ನು ಪರಿಶೀಲಿಸಲಾಗಿದೆ.
ಚಿತ್ರದುರ್ಗದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ (District Surgeon) ಡಾ. ಎಸ್.ಪಿ. ರವೀಂದ್ರ ಮತ್ತು ತೂಕ ಹಾಗೂ ಅಳತೆ ಇಲಾಖೆಯ ಇನ್ಸ್ಪೆಕ್ಟರ್ ವೆಂಕಟೇಶ್ ಅವರ ನಿವಾಸಗಳ ದಾಳಿ ನಡೆಸಿದ್ದಾರೆ. ಜಿಲ್ಲಾ ಆಸ್ಪತ್ರೆ ಮತ್ತು ಅಕ್ಷಯ ಗ್ಲೋಬಲ್ ಆಸ್ಪತ್ರೆಯಲ್ಲೂ ಶೋಧ ನಡೆಸಲಾಗಿದೆ.
ಹಾಸನ ಜಿಲ್ಲೆಯ ಸಕಲೇಶಪುರ ಆರ್ಎಫ್ಒ (RFO) ಹೇಮಂತ್ ಕುಮಾರ್ ಅವರಿಗೆ ಸಂಬಂಧಿಸಿದ ಐದು ಸ್ಥಳಗಳಲ್ಲಿ ಲೋಕಾಯುಕ್ತರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.