Watch | FIR ಆಗೋ ತನಕ ಇಲ್ಲಿಂದ ಕದಲೋದಿಲ್ಲ: CEO ಕಚೇರಿ ಮುಂದೆ ಸಿಎಂ ಪಟ್ಟು, ಧರಣಿ

ಕರ್ನಾಟಕದಲ್ಲಿ ಸುಮಾರು 50 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಡಿಲಿಟ್ ಮಾಡುವ ಷಡ್ಯಂತ್ರ ನಡೆದಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುರುವಾರ ಆರೋಪಿಸಿದ್ದಾರೆ.

SIR ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ಹೆಸರುಗಳನ್ನು ಅಳಿಸಲು ಕೆಲವರು ಹಲವು ಅರ್ಜಿಗಳನ್ನು ಸಲ್ಲಿಸುವ ಮೂಲಕ 'ಸಂಚು' ನಡೆಸುತ್ತಿದ್ದಾರೆ ಎಂದು ಸಿಎಂ ಆರೋಪಿಸಿದರು.

ಸಿಎಂ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಬಳಿಕ ಸಚಿವರೊಂದಿಗೆ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ತೆರಳಿದರು.

ಸಿಇಒ ಅನ್ಬುಕುಮಾರ್ ಅವರನ್ನು ಭೇಟಿ ಮಾಡಿದ ಸಿಎಂ, ಹೆಚ್ಚಿನ ಸಂಖ್ಯೆಯ ಮತಗಳನ್ನು ಅಳಿಸಿಹಾಕುವ ಪ್ರಯತ್ನಗಳ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿ ಮನವಿ ಪತ್ರವನ್ನು ಸಲ್ಲಿಸಿದರು.

ಈ ವೇಳೆ ಈ ಬಗ್ಗೆ ಪರಿಶೀಲಿಸಿಸುವುದಾಗಿ ಚುನಾವಣಾ ಆಯುಕ್ತರು ಹೇಳಿದರು. ಪರಿಶೀಲನೆಗೆ ಎರಡು ದಿನ ಸಮಾಯವಾಕಾಶ ನೀಡಿ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಇದಕ್ಕೆ ಒಪ್ಪದ ಸಿಎಂ ಹಾಗೂ ಸಚಿವರು, ಎಫ್ಐಆರ್ ದಾಖಲಾಗುವರೆಗೂ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರ ಕಚೇರಿಯಲ್ಲೇ ಇರುವುದಾಗಿ ಪಟ್ಟು ಹಿಡಿದು ಕುಳಿತರು.

ಮೊದಲು ಪ್ರಕರಣ ದಾಖಲಿಸಿ, ಕ್ರಮದ ಭರವಸೆ ನೀಡಿ ಅಲ್ಲಿಯವರೆಗೂ ನಾವ್ಯರೂ ಈ ಜಾಗ ಬಿಟ್ಟು ಹೋಗಲ್ಲ ಎಂದು ಪಟ್ಟು ಹಿಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com