ವಿಡಿಯೋ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನೆರವಿನೊಂದಿಗೆ 'ಮತ ಕಳ್ಳತನ' ನಡೆಸಿ ದೇಶವನ್ನು 'ಹೈಜಾಕ್' ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ದೇಶವನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ರಾಹುಲ್ ಆರೋಪಿಸಿದರು.
'ದೇಶದ್ರೋಹ' ಎಸಗಿದ್ದಕ್ಕಾಗಿ ಅವರೆಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾರೂ ಕೂಡ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಗಾಂಧಿ ಸ್ಪಷ್ಟಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.