Watch | EC ಕಚೇರಿಗೆ ಮುತ್ತಿಗೆ ಯತ್ನ; ರಾಹುಲ್, ಪ್ರಿಯಾಂಕಾ, ಅಖಿಲೇಶ್ ವಶಕ್ಕೆ..!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಬಣದ ಸಂಸದರು ಮಂಗಳವಾರ ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿಯತ್ತ 'ಪ್ರಜಾಪ್ರಭುತ್ವ ಉಳಿಸಿ' ಪಾದಯಾತ್ರೆ ನಡೆಸಿದರು.

ECI ಕಚೇರಿiz ಮುತ್ತಿಗೆ ಹಾಕಲು ಯತ್ನಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿ 'ಇಂಡಿಯಾ' ಒಕ್ಕೂಟದ ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದರು.

ಸಂಸತ್ ಭವನದ ಆವರಣದಿಂದ ಚುನಾವಣಾ ಆಯೋಗದ ಕೇಂದ್ರ ಕಚೇರಿಯತ್ತ ಮೆರವಣಿಗೆಯಲ್ಲಿ ತೆರಳುತ್ತಿದ್ದ ಇಂಡಿಯಾ ಒಕ್ಕೂಟದ ಸಂಸದರನ್ನು ಸಂಸತ್ ರಸ್ತೆಯಲ್ಲಿ ಪೊಲೀಸರು ತಡೆದರು.

ಬಳಿಕ ಸಂಸದರು ರಸ್ತೆಯಲ್ಲೇ ಧರಣಿ ಕುಳಿತು ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿದರು.

ಇದಕ್ಕೂ ಮುನ್ನ ಭದ್ರತಾ ಸಿಬ್ಬಂದಿ ಮೆರವಣಿಗೆಯನ್ನು ತಡೆದಾಗ ರಾಹುಲ್ ಗಾಂಧಿ ಮತ್ತು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಪೊಲೀಸ್ ಬ್ಯಾರಿಕೇಡ್ ಮೇಲೆ ಹತ್ತಿದ್ದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com