ವಿಡಿಯೋ
ನನ್ನ ವಿರುದ್ಧ 100 ಎಫ್‌ಐಆರ್ ದಾಖಲಿಸಿ. ಪ್ರತಿಯೊಂದು ಎಫ್‌ಐಆರ್ ಕೂಡ ನನಗೆ ಒಂದು ಪದಕ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಪ್ರತಿಪಕ್ಷ ನಾಯಕರು ಜಂತರ್ ಮಂತರ್‌ನತ್ತ ಮೆರವಣಿಗೆ ನಡೆಸಿದರು.
ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಪ್ರತಿಪಕ್ಷಗಳ ನಾಯಕರು ಸಭೆ ನಡೆಸಿದ ಬಳಿಕ ಜಂತರ್ ಮಂತರ್‌ನತ್ತ ತೆರಳಿದರು.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ಚುನಾವಣಾ ಆಯೋಗದ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ವಿಡಿಯೋ ಇಲ್ಲಿದೆ ನೋಡಿ.