ವಿಡಿಯೋ
ಮತದಾರರ ಪಟ್ಟಿಯ 'ಎಸ್‌ಐಆರ್' ಪ್ರಕ್ರಿಯೆಯಲ್ಲಿನ ಅಕ್ರಮಗಳ ಆರೋಪದ ಮೇಲೆ, ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ನಟ ಹಾಗೂ ಕಾರ್ಯಕರ್ತ ಪ್ರಕಾಶ್ ರಾಜ್ ನೇತೃತ್ವದ ಗುರುವಾರ ನಡೆದ ಪ್ರತಿಭಟನೆಯಲ್ಲಿ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ಯೂಟ್ಯೂಬರ್ ಧ್ರುವ್ ರಾಠೀ ಪಾಲ್ಗೊಂಡಿದ್ದರು.
ಮಹಿಳೆಯರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಸಮಾಜದ ವಿವಿಧ ವರ್ಗಗಳ ಪ್ರತಿಭಟನಾಕಾರರು ಫ್ರೀಡಂ ಪಾರ್ಕ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.
ಈ ವೇಳೆ ಮಾತನಾಡಿದ ಪ್ರಕಾಶ್ ರಾಜ್, SIR ಪ್ರಕ್ರಿಯೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು. ವಿಡಿಯೋ ಇಲ್ಲಿದೆ ನೋಡಿ.