ವಿಡಿಯೋ
ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಭಾರೀ ಸಂಚಲನ ಉಂಟುಮಾಡುತ್ತಿದೆ.
ಕೆಲವು ದಿನಗಳ ಹಿಂದೆ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ತಮ್ಮ ಸಹೋದ್ಯೋಗಿಗಳಿಗೆ, ಸ್ಟಿಂಗ್ ಆಪರೇಷನ್ ಮಾಡುತ್ತಿದ್ದಾರೆ ಎಚ್ಚರವಾಗಿರಿ ಎಂದು ಸೂಚನೆ ನೀಡಿದ್ದರು.
ಈ ಮಧ್ಯೆ, ಮಾಜಿ ಸಿಎಂ ಸಿದ್ದರಾಮಯ್ಯ ಸೋಮವಾರ ವಿಡಿಯೊಗೆ ತಡೆಯಾಜ್ಞೆ ತಂದಿರುವುದು ಮತ್ತಷ್ಟು ಸಂಶಯಕ್ಕೆ ಈಡುಮಾಡಿದೆ.
ಈ ಸಂಬಂಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಉಲ್ಲೇಖಿಸಿ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಶಿವಕುಮಾರ್ ಅವರೇ ನೀರು ಹಾಕಿ ಬೆಳೆಸಿದ ಸ್ಟಿಂಗ್ ಆಪರೇಷನ್ ಇಂದು ಹೆಮ್ಮರವಾಗಿ ಬೆಳೆದಿದೆ ಎಂದು ಆರೋಪಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.