ವಿಡಿಯೋ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕೃಷ್ಣ ಭಟ್ ಮತ್ತು ಅವರ ಪತ್ನಿ ಮಂಗಳಾ ಇಟ್ಟಿರುವ ಸಾಂಪ್ರದಾಯಿಕ ನವರಾತ್ರಿ ಗೊಂಬೆಗಳ ಪ್ರದರ್ಶನವು ಜನರ ಗಮನ ಸೆಳೆಯುತ್ತಿದೆ.
ಕಳೆದ 40 ವರ್ಷಗಳಿಂದ ನವರಾತ್ರಿ ಸಂದರ್ಭದಲ್ಲಿ ಗೊಂಬೆಗಳನ್ನು ಪ್ರದರ್ಶಿಸುವ ಪುರಾತನ ಸಂಪ್ರದಾಯವನ್ನು ಈ ದಂಪತಿ ಉಳಿಸಿಕೊಂಡು ಬಂದಿದ್ದಾರೆ.
ಈ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೂ ಪರಿಚಯಿಸಬೇಕು ಎಂಬ ಸಂಕಲ್ಪದೊಂದಿಗೆ ತಮ್ಮ ಪ್ರಯತ್ನವನ್ನು ಮುಂದುವರಿಸಿದ್ದಾರೆ.
ಶ್ರೀರಂಗಪಟ್ಟಣದ ಪೂರ್ಣಯ್ಯ ಬೀದಿಯ ನಿವಾಸಿಗಳಾದ ಇವರು ಪ್ರತಿವರ್ಷ ನವರಾತ್ರಿ ಉತ್ಸವದ ಸಂದರ್ಭದಲ್ಲಿ ತಮ್ಮ ಮನೆಯಲ್ಲೇ ಈ ಗೊಂಬೆಗಳ ಪ್ರದರ್ಶನವನ್ನು ಆಯೋಜಿಸುತ್ತಾರೆ. ವಿಡಿಯೋ ಇಲ್ಲಿದೆ ನೋಡಿ.