ವಿಡಿಯೋ
ತುಮಕೂರು ನಗರದಲ್ಲಿ ಗುರುವಾರ ವೀರಶೈವ ಲಿಂಗಾಯತ ಸಮಾಜದ ಮುಖಂಡರಿಗಾಗಿ ಆಯೋಜಿಸಿದ್ದ ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಸಭೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಆಗ್ನೇಯ ಪದವೀಧರ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಸುರೇಶ್ ಪರವಾಗಿ ಮಾತನಾಡುತ್ತಿದ್ದರು.
ಈ ಸಂದರ್ಭದಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಹಾಗೂ ವೀರಶೈವ ಮಹಾಸಭಾದ ಉಪಾಧ್ಯಕ್ಷ ಶಶಿ ಹುಲಿಕುಂಟೆ ಮಠ್ ಅವರು ಆಕ್ಷೇಪ ವ್ಯಕ್ತಪಡಿಸಿದರು.
ಸಮಾಜದ ಮುಖಂಡರ ಸಭೆಯಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವುದಕ್ಕೆ ಶಶಿ ಹುಲಿಕುಂಟೆ ಮಠ್ ಅವರು ವಿರೋಧ ವ್ಯಕ್ತಪಡಿಸಿದರು.
ಅವರ ಆಕ್ಷೇಪಕ್ಕೆ ಸಭೆಯಲ್ಲಿದ್ದ ಕೆಲ ಸದಸ್ಯರೂ ಬೆಂಬಲ ಸೂಚಿಸಿದರು. ಇದರಿಂದ ಸಭೆಯಲ್ಲಿ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿ ಮಾತಿನ ಚಕಮಕಿ ನಡೆಯಿತು. ವಿಡಿಯೋ ಇಲ್ಲಿದೆ ನೋಡಿ.