ವಿಡಿಯೋ
ಬೆಂಗಳೂರಿನ ಬುಧವಾರ (ಅ.21) ರಂದು ನಸುಕಿನ ಜಾವ ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ.
ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜರ್ಮಿಯಾ ರಸ್ತೆಯಲ್ಲಿರುವ ಕಟ್ಟಡವೊಂದರ ನಾಲ್ಕನೇ ಮಹಡಿಯಲ್ಲಿ, ನಿರ್ಮಾಣ ಕಾರ್ಯ ನಡೆಯುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ.
ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
ಗಾಯಗೊಂಡವರಲ್ಲಿ ನೇಪಾಳ ಮೂಲದ ಭದ್ರತಾ ಸಿಬ್ಬಂದಿ (ಸೆಕ್ಯೂರಿಟಿ ಗಾರ್ಡ್) ಮತ್ತು ನಿರ್ಮಾಣ ಕಾರ್ಮಿಕರೊಬ್ಬರು ಸೇರಿದ್ದು, ಅವರನ್ನು ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬ್ಯಾಟರಿಯೊಂದು ಸ್ಫೋಟಗೊಂಡಿದ್ದೇ ಈ ಘಟನೆಗೆ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.