ವಿಡಿಯೋ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ನವದೆಹಲಿಯಲ್ಲಿ, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿಯಾಗಿದ್ದರು.
ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸಬಾರದು ಎಂದು ಸಿಎಂ ಮನವಿ ಮಾಡಿದ್ದಾರೆ.
ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಭೂಪೇಂದ್ರ ಯಾದವ್ ಅವರೊಂದಿಗೆ ಈ ವಿಷಯವಾಗಿ ಚರ್ಚಿಸಿದ್ದೇನೆ.
ರಾಜ್ಯ ಮಟ್ಟದ ಸಮಿತಿಯ ವರದಿ ಸಲ್ಲಿಕೆಯಾಗುವವರೆಗೆ ಅಂತಿಮಗೊಳಿಸಬಾರದು ಎಂದು ಮನವಿ ಮಾಡಿದ್ದಾಗಿ ಹೇಳಿದರು.
ಮಂಡ್ಯದಲ್ಲಿ ಎರಡು ಯೋಜನೆಗಳನ್ನು ಸ್ಥಾಪಿಸಲು ಭೂಮಿ ಮಂಜೂರು ಮಾಡುವಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬರೆದ ಪತ್ರಕ್ಕೆ ಸಿಎಂ ಪ್ರತಿಕ್ರಿಯಿಸಿದ್ದಾರೆ.
ಕೊನೆಗೂ ಕುಮಾರಸ್ವಾಮಿ ತಮ್ಮನ್ನು ಕರ್ನಾಟಕ ಮುಖ್ಯಮಂತ್ರಿ ಎಂದು ಒಪ್ಪಿಕೊಂಡಿರುವುದಕ್ಕೆ ಸಂತೋಷವಾಗಿದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.