ಪ್ರಧಾನಿ ಮೋದಿ ಅವರ ವಿರುದ್ಧ ತಮ್ಮ ತಂದೆ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿದ ಹೇಳಿಕೆಯನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೋಮವಾರ ಸಮರ್ಥಿಸಿಕೊಂಡಿದ್ದಾರೆ.
ಬಿಹಾರದ ಮೊದಲ ಮುಖ್ಯಮಂತ್ರಿ ಕೃಷ್ಣ ಸಿಂಗ್ ಅವರ 139ನೇ ಜನ್ಮದಿನದ ಅಂಗವಾಗಿ ಭಾನುವಾರ ಪಾಟ್ನಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಈ ಹೇಳಿಕೆ ನೀಡಿದ್ದರು.
'ಮೋದಿ ಹೋಗುವುದಿಲ್ಲ' ಎಂದು ಸಭಿಕರಲ್ಲೊಬ್ಬರು ಕೂಗಿದಾಗ, ಅದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, "ಮೋದಿ ಕಾ ಬಾಪ್ ಭೀ ಜಾಯೇಗಾ" (ಮೋದಿ ಏನ್ ಅವರ ಅಪ್ಪನ ಹೋಗುತ್ತಾರೆ) ಎಂದು ತಿರುಗೇಟು ನೀಡಿದ್ದರು.
ಈಮಧ್ಯೆ, ಬಿಜೆಪಿ ತನ್ನದೇ ನಾಯಕರು ನೀಡಿದ ಹೇಳಿಕೆಗಳನ್ನು ಕಡೆಗಣಿಸಿ, ಈ ವಿಷಯವನ್ನು ಅನಗತ್ಯವಾಗಿ ದೊಡ್ಡದು ಮಾಡುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಸೋಮವಾರ ತಿರುಗೇಟು ನೀಡಿದ್ದಾರೆ.
ಅನಗತ್ಯ ವಿಷಯಗಳನ್ನು ದೊಡ್ಡ ವಿವಾದವನ್ನಾಗಿ ಮಾಡುವುದು ಬಿಜೆಪಿಗೆ ಇಷ್ಟ.
ಈ ಹೇಳಿಕೆಯನ್ನು ಯಾವ ಸಂದರ್ಭದಲ್ಲಿ ನೀಡಲಾಗಿದೆ ಎಂಬುದನ್ನು ಮೊದಲು ಅರ್ಥಮಾಡಿಕೊಳ್ಳಬೇಕು ಎಂದು ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.